ಪದ್ಮುಂಜ (ಎ.3)( ಯು ಪ್ಲಸ್ ಟಿವಿ): ಕಲಿಕೆಯಲ್ಲಿ ಹಿಂದುಳಿದಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್.ಎಸ್.ಎಲ್‌ಸಿ ಪರೀಕ್ಷೆ ಬರೆಯಲು ನಿರಾಕರಿಸಿದ್ದ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಕರಣ ಸುಖಾಂತ್ಯ ಕಂಡಿದೆ ಅಂತ ಹೇಳಲಾಗುತ್ತಿದೆ.

ಇದನ್ನೂ ಓದಿ: 💠ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ.ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ
ಈ ನಿಟ್ಟಿನಲ್ಲಿ ಹಾಲ್ ಟಿಕೇಟ್ ವಂಚಿತರಾಗಿದ್ದ ವಿದ್ಯಾರ್ಥಿನಿಯರಾದ ಅಸ್ಲಾ ಮತ್ತು ಪರ್ಝಾನ ಬುಧವಾರದಂದು ಪರೀಕ್ಷೆ ಬರೆದಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ. ಶೇಕಡಾ ನೂರರಷ್ಟು ಫಲಿತಾಂಶ ಬರಬೇಕೆಂದು ಕಲಿಕೆಯಲ್ಲಿ ಹಿಂದುಳಿದಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಲಾಗಿತ್ತು.
ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು.
ಸದ್ಯ ಡಿಡಿಪಿಐ ಗೋವಿಂದ್ ಮಡಿವಾಳ್ ಅವರು ಮನವೊಲಿಸಿ ತಪ್ಪಿತಸ್ಥ ಶಿಕ್ಷಕಿಗೆ ಶಿಕ್ಷೆ ನೀಡುವ ಭರವಸೆ ನೀಡಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದಿದ್ದಾರೆ. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಲು ಅವಕಾಶವಿದೆ ಎಂದು ಡಿಡಿಪಿಐ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.




ಈ ಕುರಿತು ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಯು ಪ್ಲಸ್ ಪ್ರತಿಕ್ರಿಯೆ ನೀಡಿದ್ದು ತಪ್ಪಿತಸ್ಥ ಶಿಕ್ಷಕರಿಗೆ, ಶಿಕ್ಷಕರ ಪರವಾಗಿ ವರದಿ ನೀಡಿದ ಬಿ.ಇ.ಓ ವಿರುದ್ಧ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು.ಈ ವಿಚಾರವನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
