Rikki Rai:(ಎ.19) ರಿಕ್ಕಿ ರೈ ಮೇಲೆ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ನಡೆದಿದೆ.

ಇದನ್ನೂ ಓದಿ: 🛑ಕನ್ಯಾಡಿ: ವಿಶೇಷ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ರಾಜೇಂದ್ರ ಅಜ್ರಿ
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಿಕ್ಕಿ ರೈ ಮೊದಲ ಪತ್ನಿ , ರಾಕೇಶ್ ಮಲ್ಲಿ ಹಾಗೂ ನಿತೇಶ್ ಎಸ್ಟೇಟ್ ಕಂಪನಿ ವಿರುದ್ಧ ಬಸವರಾಜು ದೂರು ನೀಡಿರುವ ಕುರಿತು ವರದಿಯಾಗಿದೆ. ರಿಯಲ್ ಎಸ್ಟೇಟ್ ವಿಚಾರ ಈ ಹಿಂದೆ ವಿವಾದವಾಗಿದ್ದು, ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ.




