Sat. Apr 19th, 2025

Dharmasthala: (ಎ.20) ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ!

ಧರ್ಮಸ್ಥಳ:(ಎ.19) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: ⭕ರಿಕ್ಕಿ ರೈ ಮೇಲೆ ಫೈರಿಂಗ್‌ ಪ್ರಕರಣ

ಎ.20 ರಂದು ಅಪರಾಹ್ನ 4 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಘಾಟನೆ ನೆರವೇರಿಸಲಿದ್ದಾರೆ.

ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.

ಡಾ| ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಸುರೇಂದ್ರ ಕುಮಾರ್‌ ಶುಭಾಶಂಸನೆ ಮಾಡಲಿದ್ದಾರೆ. ಶಾಸಕ ಹರೀಶ್‌ ಪೂಂಜ, ಮತ್ತು ವಿಧಾನ ಪರಿಷತ್‌ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್‌ ಹಾಗೂ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *