ಕಡಬ:(ಎ.23) ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನೆ ವಿರುದ್ಧ ಬೃಹತ್ ಪ್ರತಿಭಟನೆ ಎಪ್ರಿಲ್.23 ರಂದು ನಡೆಯಿತು.

ಇದನ್ನೂ ಓದಿ: 🟠ಗೇರುಕಟ್ಟೆ: ಗೇರುಕಟ್ಟೆ ಮಕ್ಕಳ ಚೈತನ್ಯ ಶಿಬಿರದ ಸಮಾರೋಪ ಹಾಗೂ ಭಾರತ್ ಮಾತಾ ಪೂಜನ ಕಾರ್ಯಕ್ರಮ
ರಾಜ್ಯ ಹೆದ್ದಾರಿ ತಡೆದು ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದರು. ಮೋದಿ ನೇತೃತ್ವದ ಸರಕಾರ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.



ಈ ಸಂದರ್ಭದಲ್ಲಿ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆಯೂ ನಡೆಯಿತು. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

