Mon. Jun 2nd, 2025

Mangaluru: ಭಾರೀ ಮಳೆಗೆ ಮನೆಯ ತಡೆಗೋಡೆ ಕುಸಿತ – ಬಾಲಕಿ ಮೃತ್ಯು

ಮಂಗಳೂರು (ಮೇ.30): ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ.

ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ, ದೇರಳೆಕಟ್ಟೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಫಾತಿಮಾ ನಯೀಮ (6) ಎನ್ನುವ ಮಗು ಮೃತಪಟ್ಟಿದೆ.

ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.

Leave a Reply

Your email address will not be published. Required fields are marked *