Sat. Jun 7th, 2025

Ujire: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ :(ಜೂ.5) “ಮಗುವಿನ ವಯಸ್ಸಿಗೆ ಅನುಗುಣವಾಗಿ ಮಗುವನ್ನು ಅರ್ಥಮಾಡಿಕೊಳ್ಳಿ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ” ಎಂದು ಎನ್.ಆರ್ ಪುರದ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಮೇರಿ ಎಮ್.ಜೆ ಹೇಳಿದರು.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ​

ಇವರು ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕ ಜಾರ್ಜ್ ಹಾಗೂ ಶಿಕ್ಷಕಿ ವೀಣಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Leave a Reply

Your email address will not be published. Required fields are marked *