Tue. Jun 24th, 2025

Ujire International Yoga Day: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ :(ಜೂ.21) “ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿ ಹಾಗೂ ಮನಸ್ಸಿನ ನೆಮ್ಮದಿಯನ್ನು ಪಡೆಯಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲೆ ಡಾ.ಸುಜಾತ ಕೆ.ಜೆ ಹೇಳಿದರು.

ಇದನ್ನೂ ಓದಿ: ⭕⭕ಉಡುಪಿ: ನೀಟ್ ಅಂಕಪಟ್ಟಿಯನ್ನೇ ನಕಲಿ ಮಾಡಿದ ವಿದ್ಯಾರ್ಥಿ

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ತಿಳಿಸಿದರು.

ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ನಿರೂಪಿಸಿ ಶಿಕ್ಷಕಿ ಶಮೀಮ್ ವಂದಿಸಿದರು.

Leave a Reply

Your email address will not be published. Required fields are marked *