Mon. Aug 18th, 2025

Mundaje: ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಮುಂಡಾಜೆ:(ಜೂ.21) ‘ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಇದನ್ನೂ ಓದಿ: ⭕ಸುಳ್ಯ: ನೇಮೋತ್ಸವದಲ್ಲಿ ಮಕ್ಕಳೊಂದಿಗೆ ನರ್ತನ ವೀಡಿಯೋ ವೈರಲ್

ಉಜಿರೆಯ ಶ್ರೀ.ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹರ್ಷಿಣಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ‘ನಮ್ಮ ಮನಸ್ಸು ಮತ್ತು ದೇಹವನ್ನು ಹತೋಟಿಯಲ್ಲಿಡಲು ಯೋಗ ಉತ್ತಮವಾದ ವಿಧಾನ; ಪರಿಸರದೊಂದಿಗೆ ಅವಲಂಬಿತರಾದ ನಾವು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡಬೇಕು’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಗೀತಾ ಮಾತನಾಡಿ, ಯೋಗದ ಹಿನ್ನೆಲೆ ಹಾಗೂ ವಿದ್ಯಾರ್ಥಿಗಳಿಗೆ ಯೋಗದ ಪ್ರಸ್ತುತತೆಯನ್ನು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಶ್ರಾವ್ಯ ನಿರೂಪಿಸಿ, ನಳಿನಿ ಧನ್ಯವಾದಗೈದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಯೋಗಪ್ರದರ್ಶನ ಹಾಗೂ ಶ್ಲೋಕ ಪಠಣ ನಡೆಯಿತು.

Leave a Reply

Your email address will not be published. Required fields are marked *