Thu. Jun 26th, 2025

Qatar: ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ

ಕತಾರ್‌ : ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ.

ಇದನ್ನೂ ಓದಿ: 🟣ಬೆಳ್ತಂಗಡಿ: ಬಾರ್ಯ ಗ್ರಾಮದ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್ ಎಸ್.ಎಸ್.ಬಿ. ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆ


50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ.
ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು ಎಲ್ಲರ ಇಂದ್ರಿಯಗಳನ್ನು ಆಕರ್ಷಿಸಿತು.


ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು ಇದ್ದವು, ಮತ್ತೊಂದೆಡೆ ನೇರ ಮಾರಾಟಗಾರರ (ಹೋಲ್ಸೇಲ್) ಮಳಿಗೆಗಳು ಇದ್ದವು. ಭಾರತ , ಕತಾರ್ , ಶ್ರೀಲಂಕಾ , ಬಾಂಗ್ಲಾದೇಶ, ಫಿಲಿಪಿನ್ಸ್ ಇನ್ನೂ ಹಲವು ದೇಶದ ಜನರು ಬಂದು ಈ ಮಾವಿನ ಮೇಳದಲ್ಲಿ ಹಣ್ಣಿನ ಯಾವುದಾದರೂ ಒಂದು ರುಚಿಯನ್ನು ಸೇವಿಸಿ ಹೋಗಿರುವರು.


ನಿಜವಾಗಲೂ ಅದ್ಭುತ ದೃಶ್ಯವಲ್ಲವೇ? ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ಗೋವಾ ಇನ್ನಿತರ ರಾಜ್ಯಗಳಿಂದ ಆಮದು ತರಿಸಿದ ಮಾವಿನ ಹಣ್ಣುಗಳು. ಕತರಿನ ಭಾರತೀಯ ದೂತಾವಾಸದ ನೇತೃತ್ವದಲ್ಲಿ ಐಬಿಪಿಸಿ (ಭಾರತೀಯ ವ್ಯವಹಾರ ಹಾಗೂ ವೃತ್ತಿ ನಿರತ ಮಂಡಳಿಯ) ಸಹಯೋಗದೊಂದಿಗೆ ಏರ್ಪಡಿಸಿದ್ದ ಎರಡು ವಾರಗಳ ಮಾವಿನ ಮೇಳವು, ದಿನಾಂಕ 12 ಜೂನ್ 2025ರಂದು ಪ್ರಾರಂಭವಾಗಿ 21 ಜೂನ್ 2025ರಂದು ಸಂಪನ್ನಗೊಂಡಿತು.

Leave a Reply

Your email address will not be published. Required fields are marked *