ಮಂಗಳೂರು:(ಜೂ.26) ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ ಬ್ಯಾಂಕ್ ನ ಸ್ಟೋರ್ ರೂಮ್ ನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ್ ಯಾದವ್ (61) ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ.

ಇದನ್ನೂ ಓದಿ: ⭕Bengaluru: ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ವೃದ್ಧ ದಂಪತಿ ಆತ್ಮಹತ್ಯೆ
ಗಿರಿಧರ್ ಯಾದವ್ ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಬ್ಯಾಂಕ್ ನ ಮೇಲಿನ ಪ್ರೀತಿಗೆ ಪ್ರತಿದಿನ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ. ಅದೇ ರೀತಿ ನಿನ್ನೆ ಬ್ಯಾಂಕ್ ಗೆ ಬಂದವರು ಮತ್ತೆ ಮನೆಗೆ ಹಿಂದಿರುಗಿರಲ್ಲಿಲ್ಲ.
ಈ ಹಿನ್ನಲೆ ಗಿರಿಧರ್ ಅವರ ಪತ್ನಿ ಬಂದರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತಂತೆ ದೂರು ದಾಖಲಿಸಿದ್ದರು ಎಂದು ಹೇಳಲಾಗಿದೆ.
ಇಂದು ಬೆಳಿಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕ್ ನ ಸ್ಟೋರ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ಥಿತಿಯಲ್ಲಿ ಗಿರಿಧರ್ ಅವರು ಕಂಡು ಬಂದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



