ಮುಂಡಾಜೆ:(ಜು.2) ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ವಿಭಾಗದ ವತಿಯಿಂದ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಇಂಡೋ-ಟಿಬೇಟಿಯನ್ ಬಾರ್ಡರ್ ಫೋರ್ಸ್ ನ ಅನುಪ್ರಿಯಾ ಅವರು ಮಾತನಾಡಿ, ಭಾರತೀಯ ಸೇನೆಯಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಸಂವಾದದ ಮೂಲಕ ಮಾಹಿತಿಯನ್ನು ನೀಡಿ, ಸೇನೆಗೆ ಸೇರುವಂತೆ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ ಕೆ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು, ಶಾರೀರಿಕ ಶಿಕ್ಷಣ ಉಪನ್ಯಾಸಕ ಸಂದೀಪ್ ಐ ಧನ್ಯವಾದಗೈದರು.


