ಧರ್ಮಸ್ಥಳ:(ಜು.2) ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಇದನ್ನೂ ಓದಿ: ⭕ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ
ಧರ್ಮಸ್ಥಳದ ಅಶ್ವಿನಿ ಕ್ಲಿನಿಕ್ ನ ವೈದ್ಯೆಯಾದ ಡಾ .ಮೃಣಾಲಿನಿ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬೇಕು. ಮಕ್ಕಳು ಬೇಗ ಮಲಗಿ ಬೇಗ ಏಳಬೇಕು. ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊoಡು ಆರೋಗ್ಯವಂತರಾಗಿ ಬಾಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕಮಲ್ ತೇಜು ರಜಪೂತ್ ಹಾಗೂ ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಶಿಕ್ಷಕಿ ಪೂರ್ಣಿಮ ಕೆ ಎಂ ಸ್ವಾಗತಿಸಿ , ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಶಿಕ್ಷಕಿ ಕಾವ್ಯಾ ನಿರ್ವಹಿಸಿದರು.


