Sat. Jul 5th, 2025

Mangaluru: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್‌

ಮಂಗಳೂರು:(ಜು.5) ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: 🟢ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಭವನಕ್ಕೆ& ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್


ಆರೋಪಿ ಅಬ್ದುಲ್ ರೆಹಮಾನ್ ನನ್ನು ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರೆಹಮಾನ್ ಕತಾ‌ರ್ ನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ ಕತಾರ್ ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರೆಹಮಾನ್ ವಿದೇಶಕ್ಕೆ ಪರಾರಿಯಾಗಿದ್ದ. ಹೀಗಾಗಿ, ಎನ್‌ಐಎ ಅಧಿಕಾರಿಗಳು ಅಬ್ದುಲ್ ರೆಹಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರೆಹಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್‌ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರೆಹಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್‌ಐಎ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿದೆ.

Leave a Reply

Your email address will not be published. Required fields are marked *