ಚಾಮರಾಜನಗರ (ಜು.9): ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಇದನ್ನೂ ಓದಿ: 🎂ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿಯವರಿಗೆ ಹುಟ್ಟು ಹಬ್ಬದ ಶುಭಾಶಯಗಳು
ಮನೋಜ್ ಕುಮಾರ್ (10) ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಂದು ತಿಳಿದುಬಂದಿದೆ.



