ಉಜಿರೆ: (ಜು.10) ಎಮ್. ರಾಮಣ್ಣ ಶೆಟ್ಟಿ ಮೆಮೋರಿಯಲ್ ಶಾಲೆ, ತೋಕೂರು ಇಲ್ಲಿ “ಸಂವೇದನ 2025” ಎಂಬ ಶೀರ್ಷಿಕೆಯಡಿಯಲ್ಲಿ ಅಂತರ್ ಶಾಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಕಾರ್ಯ ಯೋಜನೆ ತಯಾರಿ ಹಾಗೂ

ಇದನ್ನೂ ಓದಿ: 🟢ಮುಂಡಾಜೆ: ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ
ಪ್ರಸ್ತುತಿ ಸ್ಪರ್ಧೆಗಳನ್ನು ಆಯೋಜಿಸಿದ್ದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿ ಪೃಥ್ವಿ ಹಾಗೂ ತೇಜಸ್ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.


