Sat. Jul 12th, 2025

Mangalore: ಮಂಗಳೂರು MRPLನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು

ಮಂಗಳೂರು (ಜು.12): ಮಂಗಳೂರು ಹೊರವಲಯದ ಸುರತ್ಕಲ್​ನಲ್ಲಿರುವ ರಿಫೈನರಿ ಆ್ಯಂಡ್​ ಪೆಟ್ರೋ ಕೆಮಿಕಲ್ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಂ ಪ.ಪೂ.ಕಾಲೇಜಿನಲ್ಲಿ ಅರ್ಥ ಸಂಘ ಉದ್ಘಾಟನೆ

ಪ್ರಯಾಗ್​ರಾಜ್ ಮೂಲದ ದೀಪ ಚಂದ್ರ ಭಾರ್ತಿಯಾ , ಕೇರಳದ ಬಿಜಿಲ್ ಪ್ರಸಾದ್ ಮೃತಪಟ್ಟ ಕಾರ್ಮಿಕರು. ಇವರನ್ನು ರಕ್ಷಿಸಲು ಯತ್ನಿಸಿದ ಗದಗ ಮೂಲದ ವಿನಾಯಕ ಅಸ್ವಸ್ಥಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. MRPLನ ಒಎಂಎಸ್(ಆಯಿಲ್ ಮೂವ್​ಮೆಂಟ್ ಸರ್ವಿಸ್)ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕಾರ್ಮಿಕರು ಪರಿಶೀಲನೆಗೆ ತೆರಳಿದ್ದರು.

ಎಂಎಂಎಸ್ ವಿಭಾಗದ ಟ್ಯಾಂಕ್ ಮೇಲ್ಚಾವಣಿಗೆ ತೆರಳಿದಾಗ ವಿಷಾನಿಲ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ದೀಪಚಂದ್ರ ಮತ್ತು ಬಿಜಿಲ್ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಗದಗ ಮೂಲದ ವಿನಾಯಕ ಮಯಗೇರಿಗೆ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಎಂಆರ್​ಪಿಎಲ್ ಆಡಳಿತ ಮಂಡಳಿ ಗ್ರೂಪ್ ಜನರಲ್ ಮ್ಯಾನೇಜರ್ ಒಳಗೊಂಡ ಉನ್ನತಮಟ್ಟದ ತನಿಖೆಗೆ ಸಮಿತಿ ರಚಿಸಿದೆ.ವಿ ಷಾನಿಲ ಸೇವಿಸಿ ಒಟ್ಟು ಐವರು ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಇಬ್ಬರು ಮೃತಪಟ್ಟರು. ಓರ್ವನ ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *