Sun. Jul 13th, 2025

ಮುಲ್ಕಿ : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಉದ್ಯಮಿ ಅರೆಸ್ಟ್!

ಮುಲ್ಕಿ, (ಜುಲೈ.13): ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: 🟣ಕಡಬ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯ ಸಂತ್ರಸ್ತೆ ತಾಯಿ ನೀಡಿದ ದೂರು ಆಧರಿಸಿ ಮುಲ್ಕಿ ಠಾಣಾ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದಾರೆ.

ನಡೆದದ್ದೇನು?
ಉದ್ಯಮಿ ಕಳೆದ ಎರಡು ತಿಂಗಳಿನಿಂದ ಉದ್ಯಮಿ ಬಾಲಕಿಯನ್ನು ತನ್ನ ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ. ಈ ವೇಳೆ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಮುಲ್ಕಿ ಪೊಲೀಸರು ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತನಿಖೆ‌ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆದರೆ ಅಧಿಕ ರಕ್ತದೊತ್ತಡಕ್ಕೆ ಒಳಗಾದ ಬಂಧಿತ ಆರೋಪಿಯನ್ನು ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *