Tue. Jul 15th, 2025

ಬೆಳ್ತಂಗಡಿ: ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

ಬೆಳ್ತಂಗಡಿ: (ಜು.15): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಶಿಕ್ಷಣ ಅತೀ ಮೌಲ್ಯವುಳ್ಳದ್ದು. ಬರೀ ಓದಿದರೆ ಸಾಲದು ಇಂದು ವಿದ್ಯಾರ್ಥಿಗಳು ತುಂಬಾ ಪ್ರಯತ್ನವನ್ನು ಮಾಡಬೇಕು. ಹಾಗೆಯೇ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಒಳ್ಳೆಯ ವಿದ್ಯೆ ಇದ್ದರೆ; ಉದ್ಯೋಗದ ಜೊತೆಗೆ ಭವಿಷ್ಯ ಉತ್ತಮವಾಗಿರುತ್ತದೆ.

ಇದನ್ನೂ ಓದಿ: ⭕ಬೆಂಗಳೂರು: ಡೆತ್‌ನೋಟ್‌ ಬರೆದಿಟ್ಟು ತಾಯಿ ಮಗಳು ಆತ್ಮಹತ್ಯೆ!

ಉದ್ಯೋಗ ನಮಗೆ ಗೌರವ ತಂದು ಕೊಡುತ್ತದೆ. ಇಲ್ಲಿಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಗುಣಮಟ್ಟದ ತರಬೇತಿಯನ್ನು ಆಯೋಜಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ – ಲಾಯಿಲ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿ-ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರು ಕೃಷ್ಣ ಟಿ. ಇವರು ಕಂಪ್ಯೂಟರ್‌ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.


ಈ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ರಮೇಶ್‌ ಉಪಸ್ಥಿತರಿದ್ದು, ಕಂಪ್ಯೂಟರ್‌ ಶಿಕ್ಷಣವು ಮುಂದಿನ ನಿಮ್ಮ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ತುಂಬಾ ಸಹಾಯವಾಗಲಿದೆ. ಎಲ್ಲಾ ವಿದ್ಯಾರ್ಥಿಗಳ ಕನಸು ನನಸಾಗಲಿ ಎಂದರು.


ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ಮತ್ತು ಅಂಕಪಟ್ಟಿ ವಿತರಿಸಲಾಯಿತು. ಒಟ್ಟು 37 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ 10 ಮಂದಿ ಉನ್ನತ ಶ್ರೇಣಿ ಹಾಗೂ 26 ವಿದ್ಯಾರ್ಥಿಗಳು ʼಎʼ ಗ್ರೇಡ್‌ನಲ್ಲಿ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ. ಕಾರ್ಯಕ್ರಮವನ್ನು ಕಂಪ್ಯೂಟರ್‌ ತರಬೇತುದಾರರು ಜಯಶ್ರೀ ಇವರು ನಿರ್ವಹಣೆ ಮಾಡಿ, ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *