ಬೆಳ್ತಂಗಡಿ :(ಜು.16) ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜುಲೈ 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಹಾಗೂ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು, ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಸಂದರ್ಭೋಚಿತವಾಗಿ ಮಾತನಾಡಿದರು. ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ,ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ ಸ್ವಾಗತಿಸಿ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ ಧನ್ಯವಾದವಿತ್ತರು.

