ಪುತ್ತೂರು:(ಜು.16) ಪುತ್ತೂರಿನ ಸಾಮೆತ್ತಡ್ಕದಲ್ಲಿ ಪತ್ತೆಯಾಗಿದ್ದ ಅಕ್ರಮ ವೇಶ್ಯಾವಾಟಿಕೆ ಪ್ರಕರಣದ ಆರೋಪಿಗಳಾಗಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: 🔴ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ
ಜು.1ರಂದು ರಾತ್ರಿ ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಸಾಮೆತ್ತಡ್ಕದಲ್ಲಿ ವಿಲೆಡ್ ಡಿಸೋಜ ಎಂಬವರ ಮನೆ ಸಮೀಪದ ಕಟ್ಟಡದಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿಯಾಧರಿಸಿ ಈ ದಾಳಿ ನಡೆದಿತ್ತು.
ಅಲ್ಲಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದ ಪೊಲೀಸರು ಆರೋಪಿಗಳಾದ ವಿಲೆಡ್ ಡಿ ಸೋಜ ಮತ್ತು ಸುಳ್ಯ ಮೂಲದ ಲಕ್ಷ್ಮೀಶ ಎಂಬವರನ್ನು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.



