Sun. Jul 20th, 2025

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್ಯಗಾರ

ಉಜಿರೆ:(ಜು.19) ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು. 19 ರಂದು ರಸ್ತೆ ಸಂಚಾರ ನಿಯಮ ಹಾಗೂ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಇದನ್ನೂ ಓದಿ: ⭕ಮಂಗಳೂರು: ಭಾರೀ ಮಳೆಗೆ ಮನೆಗೆ ನೀರು ನುಗ್ಗಿತೆಂದು ಮನೆ ಖಾಲಿ ಮಾಡಿದ ಕೆಲವೇ ಕ್ಷಣಗಳಲ್ಲಿ ಮನೆ ಮಾಲೀಕ ಸಾವು

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ವಹಿಸಿದ್ದರು. ಈ ಸಂದರ್ಭದಲ್ಲಿ ಮೊದಲಾಗಿ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ತಿಳಿ ಹೇಳಿದರು.

ಕಾರ‍್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆದ ಅರ್ಜುನ್ ಎಚ್. ಕೆ. ಇವರು ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಿ ಯಾವ ರೀತಿ ಮುಂಜಾಗ್ರತಾ ಕ್ರಮವನ್ನು ವಹಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ರವಿಕುಮಾರ್, ಶ್ರೀಮತಿ ಫಿಲೋಮಿನಾ ಹಾಗೂ ಇತರರು ಉಪಸ್ಥಿತರಿದ್ದರು. ಸಹ ಶಿಕ್ಷಕಿಯಾದ ಶ್ರೀಮತಿ ನಿಶಾ ಇವರು ಕಾರ‍್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದಗಳು ಅರ್ಪಿಸಿದರು.

Leave a Reply

Your email address will not be published. Required fields are marked *