Tue. Jul 22nd, 2025

Vitla: ಟಿಪ್ಪ‌ರ್ ಮತ್ತು ಕಾರು ನಡುವೆ ಭೀಕರ ಅಪಘಾತ – ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾದ ನವವಿವಾಹಿತ ಮೃ#ತ್ಯು

ವಿಟ್ಲ:(ಜು.22) ಆಲ್ಟೊ ಕಾರು ಮತ್ತು ಮಿನಿ ಟಿಪ್ಪ‌ರ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.

ಇದನ್ನೂ ಓದಿ: 🟣ಉಜಿರೆ:(ಜು.24) ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನ ಸೇವೆ


ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರು ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಹಾಗೂ ಮಗು ಗಂಭೀರ ಗಾಯಗೊಂಡಿದ್ದರು.


ಗಾಯಾಳುಗಳನ್ನು ಅನಂತಾಡಿ ಗ್ರಾಮದ ಆಶ್ವತ್ತಡಿ ಮೂಲದವರೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕೆತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ತಿಂಗಳ ಹಿಂದೆ ಮದುವೆಯಾದ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

Leave a Reply

Your email address will not be published. Required fields are marked *