ನಿಡ್ಲೆ (ಆ.12): ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ಆಗಸ್ಟ್ 11ರಂದು ನಿಡ್ಲೆಯಲ್ಲಿ ನಡೆಯಿತು.

ಇದನ್ನೂ ಓದಿ: 🟣ಶಿಬಾಜೆ : ಶಿಬಾಜೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ
ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಅಧ್ಯಕ್ಷರಾದ ಶ್ರೀ ಧನಂಜಯ ಗೌಡ ರವರು ಚಾಲನೆ ನೀಡಿ ನಾವು ಯಾವಾಗಲೂ ಇನ್ನೊಬ್ಬರ ನೆರಳಿನಲ್ಲಿ ಬದುಕದೆ ಸ್ವ – ಉದ್ಯೋಗ ಮಾಡುವುದರ ಮೂಲಕ ನಮ್ಮ ಬದುಕಿಗೆ ನಾವೇ ದಾರಿದೀಪವಾಗಬೇಕು, ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಕನ್ಯಾಡಿ ಸೇವಾಭಾರತಿ(ರಿ.), ಕಾರ್ಯದರ್ಶಿ ಶ್ರೀ ಬಾಲಕೃಷ್ಣ ರವರು ಮಾತನಾಡಿ ಮಹಿಳೆಯರು ಸ್ವಂತ ಕೆಲಸವನ್ನು ಮಾಡಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತೇವೆ ಎಂಬ ಧೈರ್ಯ ಇದ್ದರೆ ಯಾವುದು ಅಸಾಧ್ಯವಾದ ಮಾತಲ್ಲ ಎಲ್ಲವೂ ಸಾಧ್ಯ ಎಂದು ಶುಭಹಾರೈಸಿದರು.
ನಿಡ್ಲೆ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಮೋಹನ್ ಪೂಜಾರಿ, ನಿಡ್ಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ದಿನೇಶ್, ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಹೇಮಾವತಿ, ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 32 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲಿಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದಲ್ಲಿ ಶ್ರೀಮತಿ ಹೇಮಾವತಿ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋ – ಆರ್ಡಿನೇಟರ್ ಸುಮ ನಿರೂಪಿಸಿ, ಶ್ರೀಮತಿ ಸುಮನ ಧನ್ಯವಾದವಿತ್ತರು.
