ಉಜಿರೆ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: ⭕ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ
ಈ ಉಪನ್ಯಾಸದಲ್ಲಿ ಸ್ವಾತಂತ್ರ್ಯ ದಿನದ ಮಹತ್ವ, ರಾಷ್ಟ್ರಧ್ವಜದ ಬಗ್ಗೆ ಗೌರವ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳು ಹಾಗೂ ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರಗಳನ್ನು ಬೆಳೆಸುವ ಕುರಿತು ಸಮಿತಿಯ ಕಾರ್ಯಕರ್ತರು ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಬದನಾಜೆ ಮಾಚಾರ ಶಾಲೆ ಮತ್ತು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಂಡಾಜೆ ಈ ಎರಡು ಶಾಲೆಗಳ ಒಟ್ಟು 500ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಮಕ್ಕಳು ಉಪನ್ಯಾಸದ ಕುರಿತು ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮತ್ತು ಸದ್ಗುಣಗಳನ್ನು ಮೂಡಿಸಲು ಸಹಕಾರಿಯಾಗಿವೆ ಎಂದು ಶಾಲೆಯ ಶಿಕ್ಷಕರು ಪ್ರಶಂಸೆ ವ್ಯಕ್ತಪಡಿಸಿದರು.

