Fri. Aug 15th, 2025

ಬೆಳ್ತಂಗಡಿ : ಗಾಂಜಾ ಪ್ರಕರಣದ ಆರೋಪಿ ರಫೀಕ್ ಅರೆಸ್ಟ್

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನಾದ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್ ಎಂಬಾತನನ್ನು

ಬೆಳ್ತಂಗಡಿ ಠಾಣಾ ಪೊಲೀಸ್ ರವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಆರೋಪಿತನ ಮೇಲೆ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು CEN ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದಕ ಜಿಲ್ಲಾ CEN ಪೊಲೀಸ್ ಠಾಣೆ, ಹಾಗೂ ಬಂಟ್ಟಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿರುವುದು ಕಂಡು ಬರುತ್ತದೆ.

Leave a Reply

Your email address will not be published. Required fields are marked *