ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79 ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕ್ಷೇತ್ರದ ಮಣೆಗಾರರಾದ ಶ್ರೀ ವಸಂತ ಭಟ್ ಇವರು ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ , ಸಹಶಿಕ್ಷಕರು ಮಕ್ಕಳು ಮತ್ತು ಪೋಷಕರು ಭಾಗವಹಿಸಿದ್ದರು.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಪಟ್ಟಿಯನ್ನು ನಿಖಿಲಾ ವಾಚಿಸಿದರು.
ಶಿಕ್ಷಕ ಶೇಖರ ಗೌಡ ನಿರೂಪಿಸಿದ ಕಾರ್ಯಕ್ರಮವನ್ನು ಶಿಕ್ಷಕಿ ಪೂರ್ಣಿಮ ನಿರೂಪಿಸಿ ಶಿಕ್ಷಕಿ ಉಷಾ ವಂದಿಸಿದರು.


