Thu. Aug 21st, 2025

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಮುಂಡಾಜೆ: ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡುವ ‘ಸದ್ಭಾವನಾ ದಿನಾಚರಣೆ’ಯನ್ನು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ಆಚರಿಸಲಾಯಿತು.

ಇದನ್ನೂ ಓದಿ: 🛑ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಉಡುಪಿ ಪೊಲೀಸ್‌ ವಶಕ್ಕೆ


ಈ ಸಂದರ್ಭದಲ್ಲಿ ರೇಂಜರ್ ಲೀಡರ್ ವಸಂತಿ ಇವರು ಸದ್ಭಾವನಾ ದಿನದ ಪ್ರಸ್ತುತ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಇವರು ‘ಸದ್ಭಾವನಾ ದಿನಾಚರಣೆ’ಯ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *