ಇಳಂತಿಲ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಇಳಂತಿಲ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ನಾರ್ಣಪ್ಪ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು.ಮಂಡಲ ಪ್ರಮುಖರಾದ ರಾಜೇಶ್ ಪೆರ್ಮುಡ, ಸುಧಾಕರ ಅಡ್ಯಾರ್, ಸುಧೀರ್ ಸುವರ್ಣ ರವರು ಬೈಠಕ್ ನೀಡಿದರು.
ಈ ಸಂದರ್ಭದಲ್ಲಿ , ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ನಾವೂರು, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲ್, ತಣ್ಣೀರುಪಂಥ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್,ಇಳಂತಿಲ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುರೇಶ್ ಬಣ್ಣೆಂಗಳ,ಇಳಂತಿಲ ಪಂಚಾಯತ್ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.



