ಬೆಳ್ತಂಗಡಿ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ನ್ಯಾಯತರ್ಪು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.
ಈತ ಪಲ್ಲಾದೆ ಯಲ್ಲಿರುವ ಖಾಸಗಿ ತೋಟದಲ್ಲಿರುವ ದೊಡ್ಡ ಕೆರೆಗೆ ಮೀನು ಹಿಡಿಯಲೆಂದು ಹೋಗಿದ್ದ, ಮೀನು ಹಿಡಿಯುವ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ.

ಕೆರೆಯಲ್ಲಿ ಈತನ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.


