Thu. Aug 28th, 2025

ಉಜಿರೆ :( ಸೆ.3) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

ಉಜಿರೆ: ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಸೆ.3 ಬುಧವಾರ ಬೆಳಿಗ್ಗೆ 9:೦೦ರಿಂದ ಮಧ್ಯಾಹ್ನ 1:೦೦ರವರೆಗೆ ನಡೆಯಲಿದೆ.

ಈ ಶಿಬಿರದಲ್ಲಿ ಖ್ಯಾತ ಸಂಧಿವಾತ ತಜ್ಞರಾದ ಡಾ| ಅಶ್ವಿನಿ ಕಾಮತ್ ಭಾಗವಹಿಸಲಿದ್ದಾರೆ. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಬಹುದು.

ಈ ಶಿಬಿರದಲ್ಲಿ ಉಚಿತ ಸಮಾಲೋಚನೆಯ ಜತೆಗೆ ರಕ್ತ ಪರೀಕ್ಷೆಗೆ 2೦% ಹಾಗೂ ಔಷಧಗಳಿಗೆ 1೦% ರಿಯಾಯಿತಿಯನ್ನು ಪಡೆಯಬಹುದಾಗಿದೆ. ಹೆಸರು ನೊಂದಾಯಿಸಿಕೊಳ್ಳಲು 7760397878, 8073349216 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *