Thu. Aug 28th, 2025

ಉಜಿರೆ:(ಸೆ.5) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಉಜಿರೆ: ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ದಿನಾಂಕ 05/09/2025 ಶುಕ್ರವಾರದಂದು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: 🔴ಉಜಿರೆ 🙁 ಸೆ.3) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

ಆದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:00 ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತ್ರಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಈ ಶಿಬಿರದಲ್ಲಿ ಉಚಿತವಾಗಿ ಮಾಡಲಾಗುವುದು.

ಫಿಸಿಯೋಥೆರಪಿ ಸಮಾಲೋಚನೆ ಉಚಿತ ಮತ್ತು ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ದೊರೆಯಲಿದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀತಮ್ ಈ ಶಿಬಿರವನ್ನು ನಡೆಸಿಕೊಡಲಿದ್ದಾರೆ. ಈ ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವವರು ದಿನಾಂಕ 04/09/2025 ರ ಒಳಗೆ ಕಚೇರಿ ಸಮಯದಲ್ಲಿ 7760397878 ಅಥವಾ 8073349216 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *