ಉಜಿರೆ: (ಸೆ.6) ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾಗಿ ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ.ದಿವ್ಯಪ್ರಿಯಾ ಹಾಗೂ ಡಾ.ಅಂಕಿತ ಇವರು ಉತ್ತಮ ಪೌಷ್ಠಿಕ ಆಹಾರ ಸೇವನೆ ಹಾಗೂ ಮಾನಸಿಕ ಆರೋಗ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳೊಂದಿಗೆ ಸವಿಸ್ತೃತ ಮಾಹಿತಿ ಹಂಚಿಕೊಂಡರು.


ಕಾರ್ಯಗಾರದಲ್ಲಿ ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮ ನಿರೂಪಿಸಿದರು.
