(ಸೆ.17) ಪುತ್ತೂರಿನಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಆರೋಪಿಗೆ ಶಿಕ್ಷೆ ವಿಧಿಸಿದೆ.

ಕಡಬ ತಾಲೂಕಿನ ಮಾದನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತನು ಕಳೆದ ಏಪ್ರಿಲ್ 25ರಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಯುವತಿಯ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರು, ಆರೋಪಿಗೆ ನಾಲ್ಕು ತಿಂಗಳ ಕಠಿಣ ಕಾರಾಗೃಹವಾಸ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಕಾರಾಗೃಹ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಈ ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಕವಿತಾ ಕೆ. ಅವರು ಸರ್ಕಾರದ ಪರವಾಗಿ ವಾದಿಸಿದ್ದರು.

