ಧರ್ಮಸ್ಥಳ: ಧರ್ಮಸ್ಥಳದ ಗ್ರಾಮಸ್ಥರೊಬ್ಬರು ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ⭕ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಕಮೆಂಟ್
ತನಿಖಾ ಪ್ರಕ್ರಿಯೆಯಲ್ಲಿ ವಿಠಲ್ ಗೌಡ ಎಸ್‌ಐಟಿ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಆರೋಪ ದೂರಿನಲ್ಲಿ ಕೇಳಿಬಂದಿದೆ.
ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ಯಾವುದೇ ಮಾಹಿತಿ ಬಹಿರಂಗಪಡಿಸದಿರುವ ಹೊರತು, ವಿಠಲ್ ಗೌಡ ವಿಡಿಯೋಗಳನ್ನು ಹರಡಿ ತನಿಖೆಯ ಹಾದಿಯನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿಠಲ್ ಗೌಡ ಕೆಲವು ವ್ಯಕ್ತಿಗಳೊಂದಿಗೆ ಷಡ್ಯಂತ್ರ ಮಾಡಿ, ವಿಚಾರಣೆ ಮುಗಿಯುತ್ತಿದ್ದಂತೆ ಹೊರಬಂದು ಯೂಟ್ಯೂಬ್ ಚಾನೆಲ್‌ಗಳಿಗೆ ಸಂದರ್ಶನ ನೀಡಿದ್ದಾರೆ. ಇದರ ಮೂಲಕ ತನಿಖೆ ಹಾದಿ ತಪ್ಪಿಸಲು ಯತ್ನಿಸಿದ್ದಾರೆ ಎಂಬ ಆರೋಪವಿದೆ.
ಇದಲ್ಲದೆ, ಸಾಕ್ಷ್ಯಗಳನ್ನು ನಾಶಮಾಡುವ ಉದ್ದೇಶದಿಂದ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿದ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಠಲ್ ಗೌಡ ವಿರುದ್ಧ ತನಿಖೆ ನಡೆಸುವಂತೆ ಎಸ್‌ಐಟಿಯನ್ನು ಒತ್ತಾಯಿಸಲಾಗಿದೆ. ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ದೂರು ಸ್ವೀಕರಿಸಿದ್ದಾರೆ.


