Tue. Dec 2nd, 2025

ಬೆಳ್ತಂಗಡಿ: ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರಿಗೆ ಪುತ್ತೂರು ಎಸಿ ಆದೇಶ

ಬೆಳ್ತಂಗಡಿ : ಹಲವಾರು ಪ್ರಕರಣ ಸಂಬಂಧ ಉಜಿರೆಯ ರೌಡಿಶೀಟರ್ ಅಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು. ಬೆಳ್ತಂಗಡಿ ಪೊಲೀಸರು ಪುತ್ತೂರು ಎಸಿ ಕೊನೆಗೂ ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.

ಇದನ್ನೂ ಓದಿ: 🔴ಬೆಳ್ತಂಗಡಿ : ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ.

ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Leave a Reply

Your email address will not be published. Required fields are marked *