Tue. Oct 14th, 2025

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಎಸ್‌ ಎಲ್‌ ಭೈರಪ್ಪ ನಿಧನ

ಬೆಂಗಳೂರು: ನಾಡಿನ ಹಿರಿಯ ಸಾಹಿತಿ, ಕಾದಂಬರಿಕಾರ ಎಸ್‌ಎಲ್‌ ಭೈರಪ್ಪ ಅವರು ನಿಧನರಾಗಿದ್ದಾರೆ. 94 ವರ್ಷದ ಭೈರಪ್ಪ ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಇವರ ನಿಧನದಿಂದ ನಾಡಿನ ಸಾಹಿತ್ಯ ಪ್ರೇಮಿಗಳಿಗೆ ದೊಡ್ಡ ನಷ್ಟವಾಗಿದೆ.

ಇದನ್ನೂ ಓದಿ: 🔴ಉಜಿರೆ: ಬಿರುವೆರ್ ಕುಡ್ಲ (ರಿ.) ಇದರ ಸ್ಥಾಪಕಾಧ್ಯಕ್ಷ ಉದಯ್‌ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಸಂಸ್ಥೆಗೆ ಭೇಟಿ

ತಮ್ಮ ಸಾಹಿತ್ಯ ಸೇವೆಗಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಪ್ರಮುಖ ಕಾದಂಬರಿಗಳಾದ ವಂಶವೃಕ್ಷ, ದಾಟು, ತಂತು ಮುಂತಾದವು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಭೈರಪ್ಪನವರು ಕಾದಂಬರಿಗಳ ಜೊತೆಗೆ ಸೌಂದರ್ಯ ಮೀಮಾಂಸೆಯ ಕುರಿತು ಹಲವು ಗ್ರಂಥಗಳನ್ನು ರಚಿಸಿದ್ದಾರೆ. ಅವರು 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್‌ ಪ್ರಶಸ್ತಿಗಳು ಇವರಿಗೆ ಸಂದಿವೆ.

ಭೈರಪ್ಪ ಅವರು ಅವರು 1931 ಆಗಸ್ಟ್ 20 ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದ್ದರು. ಎಸ್.ಎಲ್. ಭೈರಪ್ಪನವರು ಲಿಂಗಣ್ಣಯ್ಯ ಮತ್ತು ಗೌರಮ್ಮ ದಂಪತಿಗಳ ಪುತ್ರ. ಅವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರಿನ ಸುತ್ತಮುತ್ತಲಿನ ಶಾಲೆಗಳಲ್ಲಿ ಮುಗಿಸಿದರು. ನಂತರ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿದರು. ಮಹಾರಾಜ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿಯನ್ನು ಸಹ ಪಡೆದರು.

ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಸಾಹಿತಿ ಭೈರಪ್ಪನವರು ವೃತ್ತಿ ಜೀವನದಲ್ಲಿಯೂ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರು (1958-60) ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರು (1960-66) ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕರು (1967-1971). ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ 1991ರಲ್ಲಿ ನಿವೃತ್ತಿ

ಭೈರಪ್ಪ ಅವರ ಕಾದಂಬರಿಗಳಿಗೆ ಸಂದ ಪ್ರಮುಖ ಪ್ರಶಸ್ತಿಗಳು “ತಂತು” ಕಾದಂಬರಿಗೆ ಭಾರತೀಯ ಭಾಷಾ ಪರಿಷತ್ತಿನ ಪ್ರಶಸ್ತಿ ಲಭಿಸಿದೆ.
“ದಾಟು” ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. “ವಂಶವೃಕ್ಷ”, “ಸಾಕ್ಷಿ”, “ದಾಟು” ಕಾದಂಬರಿಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. 1994 ರಲ್ಲಿ ಮಾಸ್ತಿ ಪ್ರಶಸ್ತಿ ಹಾಗೂ 1985 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಸಂದಿದೆ.

ಸರಸ್ವತೀ ಸಮ್ಮಾನ್ ಪ್ರಶಸ್ತಿ ಪಡೆದ ಮೊದಲಿಗರು 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವ ಅವರಿಗೆ ಸಿಕ್ಕಿತು. ಸರಸ್ವತೀ ಸಮ್ಮಾನ್ ಪ್ರಶಸ್ತಿಯನ್ನು ಕನ್ನಡದಲ್ಲಿ ಪಡೆದವರಲ್ಲಿ ಇವರು ಮೊದಲಿಗರು.

Leave a Reply

Your email address will not be published. Required fields are marked *