Mon. Oct 13th, 2025

ಉಜಿರೆ: ಉಜಿರೆಯ ಶ್ರೀ ಧ.ಮಂ.ಪ.ಪೂ.ಕಾಲೇಜಿನ ವತಿಯಿಂದ ಡಾ ಎಸ್.ಎಲ್. ಭೈರಪ್ಪರವರಿಗೆ ನುಡಿನಮನ

ಉಜಿರೆ: ಇತ್ತೀಚೆಗೆ ಅಗಲಿದ ಕನ್ನಡದ ಮೇರು ಸಾಹಿತಿ ಡಾ ಎಸ್ ಎಲ್ ಭೈರಪ್ಪನವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಇದನ್ನೂ ಓದಿ: ⭕ಬೆಂಗಳೂರು: ಬುರುಡೆ ಗ್ಯಾಂಗ್‌ನ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಡಾ ಎಸ್ ಎಲ್ ಭೈರಪ್ಪನವರು ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ , ಭೈರಪ್ಪನವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ ರಾಜೇಶ್ ಬಿ ಮತ್ತು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು . ಕನ್ನಡ ಉಪನ್ಯಾಸಕರಾದ ಡಾ ಮಹಾವೀರ ಜೈನ್ ಅವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *