Tue. Oct 14th, 2025

ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

(ಸೆ.26) ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣ ಹಾಗೂ ಬಿಡಿ ಭಾಗಗಳ ಖರೀದಿ ವ್ಯವಹಾರದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಮಹತ್ವದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿಯಮಿತ (ನಿ.) ವತಿಯಿಂದ ಸಂಘಕ್ಕೆ ಗೌರವ ಸಲ್ಲಿಸಲಾಗಿದೆ. ಈ ಪ್ರಶಸ್ತಿಯು ಕೃಷಿ ಕ್ಷೇತ್ರದ ಬೆಳವಣಿಗೆಗೆ ಮತ್ತು ಯಂತ್ರೋಪಕರಣಗಳ ಬಳಕೆಗೆ ಪದ್ಮುಂಜ ಸಂಘದ ಕೊಡುಗೆಯನ್ನು ಎತ್ತಿ ತೋರಿಸುತ್ತದೆ.

ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಲಿಮಿಟೆಡ್‌ನ ಮಹಾಸಭೆಯಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸೆಪ್ಟೆಂಬರ್ 25ರಂದು ಅಭಿನಂದನಾ ಪತ್ರ ಹಾಗೂ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಅಂಕಿತ.ಬಿ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಲಿ. ಇದರ ಅಧ್ಯಕ್ಷರಾದ ರವೀಂದ್ರ, ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಶೆಟ್ಟಿ, ಇತರ ನಿರ್ದೇಶಕರುಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ಪದ್ಮುಂಜ ಸಂಘದ ಈ ಪ್ರಥಮ ಸ್ಥಾನವು ಕೃಷಿ ಯಂತ್ರೋಪಕರಣಗಳ ವಿತರಣೆ ಮತ್ತು ಮಾರಾಟದಲ್ಲಿ ಅದರ ಸಕ್ರಿಯ ಪಾತ್ರ ಹಾಗೂ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದೊಂದಿಗಿನ ಯಶಸ್ವಿ ಸಹಕಾರವನ್ನು ದೃಢಪಡಿಸಿದೆ.

Leave a Reply

Your email address will not be published. Required fields are marked *