Tue. Oct 14th, 2025

ಬೆಳ್ತಂಗಡಿ :ಶ್ರೀ ಧ.ಮಂ.ಆಂ.ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.

ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ & ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಸಲಹೆ ಸೂಚನೆಯ ಮೇರೆಗೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತ ರೋಡ್ರಿಗ್ರಸ್ ರವರು ಗಾಂಧಿ ಭಾವಚಿತ್ರಕ್ಕೆ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.

ತದನಂತರ ಶಿಕ್ಷಕ ವೃಂದದವರು ಪುಷ್ಪ ನಮನವನ್ನು ಸಲ್ಲಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *