Tue. Oct 14th, 2025

ಬಳಂಜ: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಅವರು ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅ.2 ರಂದು ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಮೋಹನ್ ಕುಮಾರ್ ಅವರು ಶಿಕ್ಷಣದಿಂದ ಯಾರು ವಂಚಿತರಾಗಬಾರದೆಂದು ಹಲವಾರು ಸರಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಿದ್ದಾರೆ.ಇಂದಿನ ಯುವ ಸಮಾಜಕ್ಕೆ ನಮ್ಮ ಸಂಸ್ಕೃತಿ,ಆಚಾರ ವಿಚಾರದ ಬಗ್ಗೆ ತಿಳಿಯಪಡಿಸುವ ಉದ್ದೇಶದಿಂದ ಹಲವಾರು ವಿಶಿಷ್ಟ, ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದ್ದಾರೆ. ಪ್ರವಾಹಕ್ಕೆ ಸಿಲುಕಿ ಕೊಳಂಬೆ ಕೊಚ್ಚಿಹೋಗಿದ್ದು ವಿಶೇಷ ಆಸಕ್ತಿ ವಹಿಸಿ, ಕೊಳಂಬೆಯನ್ನು ಮರುಸೃಷ್ಟಿಗೊಳಿಸಿದ್ದು ದೊಡ್ಡ ಸಾಧನೆಯಾಗಿದೆ.ಈ ಎಲ್ಲಾ ಕೆಲಸ ಕಾರ್ಯಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಕಾರ್ಯದರ್ಶಿ ರಂಜಿತ್ ಪೂಜಾರಿ,ನಿರ್ದೇಶಕರಾದ ದಿನೇಶ್ ಪೂಜಾರಿ ಅಂತರ,ಜಗದೀಶ್ ಪೂಜಾರಿ ಬಳ್ಳಿದಡ್ಡ, ಸಂತೋಷ್ ಕುಮಾರ್ ಹಿಮರಡ್ಡ, ದಿನೇಶ್ ಪೂಜಾರಿ ನಿಟ್ಟಡ್ಕ, ಪ್ರವೀಣ್ ಡಿ ಕೋಟ್ಯಾನ್ ಹಾಗೂ ಸತ್ಯಸಾಯಿ, ಪ್ರಥಮ್,ಇತರರು  ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *