ಬೆಳ್ತಂಗಡಿ (ಅ.8): ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹಾಗೂ ಸ್ಥಳೀಯ ಸಂಸ್ಥೆಗಳ ಪ್ರಮುಖ ಮುಖಂಡರಾಗಿದ್ದ ಪೂವಪ್ಪ ಬಂಗೇರ (72) ಅವರು ಅಕ್ಟೋಬರ್ 8 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ತಮ್ಮ ಸುದೀರ್ಘ ಸಾರ್ವಜನಿಕ ಸೇವೆಯಲ್ಲಿ ಅವರು ಹಲವು ಸಂಸ್ಥೆಗಳನ್ನು ಮುನ್ನಡೆಸಿದ್ದರು. ಅವರು ತಣ್ಣೀರುಪಂತ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜೊತೆಗೆ, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಹಾಗೂ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ ಕೂಡ ಕಾರ್ಯನಿರ್ವಹಿಸಿದ್ದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಪೂವಪ್ಪ ಬಂಗೇರ ಅವರು ಪತ್ನಿ ಇಂದಿರಾ, ಪುತ್ರರಾದ ಚರಣ್ ಮತ್ತು ಚೇತನ್, ಸೊಸೆ, ಮೊಮ್ಮಗ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.



