ಉಡುಪಿ :(ಜು.20) ಇಂದಿನಿಂದ ಮೂರು ದಿನಗಳ ಕಾಲ ಮಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಮೀಸಲು ರಹಿತ ವಿಶೇಷ ಮೇಮು ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ಈ ರೈಲು ಜು.20, 21, 22ರಂದು -ಶನಿವಾರ, ರವಿವಾರ, ಸೋಮವಾರ – ಎರಡು ಕೇಂದ್ರಗಳ ನಡುವೆ ಸಂಚರಿಸಲಿದೆ. ಇಂದು ಬೆಳಗ್ಗೆ 6:00 ಮಡಗಾಂವ್ ಜಂಕ್ಷನ್ ನಿಂದ ಹೊರಟಿರುವ ಮೆಮು ರೈಲು ಅಪರಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮರು ಪ್ರಯಾಣದಲ್ಲಿ ಅಪರಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಡುವ ರೈಲು ಸಂಜೆ 7:00 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ. ಉಳಿದ ಎರಡು ದಿನಗಳಲ್ಲಿ ರೈಲು ಇದೇ ಸಮಯದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ರೈಲಿಗೆ ಕಾರವಾರ, ಹರ್ವಾಡ, ಅಂಕೋಲ, ಗೋರ್ಕಣ ರೋಡ್, ಮಿರ್ಜಾನ, ಕುಮಟ, ಹೊನ್ನಾವರ, ಮಂಕಿ, ಮುರ್ಡೇಶ್ವರ, ಭಟ್ಕಳ, ಶಿರೂರು, ಮೂಕಾಂಬಿಕಾ ರೋಡ್ ಬೈಂದೂರು, ಬಿಜೂರು, ಸೇನಾಪುರ, ಕುಂದಾಪುರ, ಬಾರಕೂರು, ಉಡುಪಿ, ಮುಲ್ಕಿ, ಸುರತ್ಕಲ್, ತೋಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.