ಮರೋಡಿ (ಅ.13) : ಮರೋಡಿಯ ಪ್ರತಿಭಾವಂತ ಯುವ ಕ್ರೀಡಾಪಟು ಕಾರ್ತಿಕ್ ಅವರು ಮೈಸೂರು ದಸರಾ ರಾಜ್ಯ ಮಟ್ಟದ ಸಿ.ಎಂ. ಕಪ್-2025 ರಲ್ಲಿ ಹೆವಿವೇಯ್ಟ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಜ್ಯ ಮಟ್ಟದಲ್ಲಿ ಪದಕದ ಸಾಧನೆ ಮಾಡಿದ್ದಾರೆ.

ಮೈಸೂರಿನಲ್ಲಿ ನಡೆದ ಈ ಚಾಂಪಿಯನ್ಶಿಪ್ನಲ್ಲಿ ಕಾರ್ತಿಕ್ ಅವರು 97+ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿ ಕಠಿಣವಾದ ರಾಜ್ಯ ಮಟ್ಟದ ಸ್ಪರ್ಧೆಯನ್ನು ಎದುರಿಸಿ ಮೂರನೇ ಸ್ಥಾನವನ್ನು ಗಳಿಸಿದ್ದಾರೆ.


ಕಾರ್ತಿಕ್ ಅವರು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು, ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಚಾಂಪಿಯನ್ಶಿಪ್ನಲ್ಲಿ ಈ ಸಾಧನೆ ಮಾಡಿದ್ದಾರೆ.

