ಬೆಳ್ತಂಗಡಿ:(ಅ.15): ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು ಬಿಜೆಪಿ ಯುವ ಮೋರ್ಚಾ ತಿಳಿಸಿದೆ.

ದೇಶದ ಜನಪ್ರಿಯ ಪ್ರಧಾನಿ ಶ್ರೀ ನರೇಂದ್ರ ಮೋದೀಜಿಯವರು ಗುಜರಾತ್ ಹಾಗೂ ಭಾರತದ ಆಡಳಿತ ಚುಕ್ಕಾಣಿ ಹಿಡಿದು 25ನೇ ವರ್ಷ ಆರಂಭವಾಗುವ ಸವಿನೆನಪಿಗಾಗಿ ಅದೇ ದಿನ ಪೂರ್ವಾಹ್ನ 8.00 ಗಂಟೆಗೆ ನಮೋ ಮ್ಯಾರಥಾನ್ ಓಟ ವಾಣಿ ಶಿಕ್ಷಣ ಸಂಸ್ಥೆಗಳ ಬಳಿಯಿಂದ ಆರಂಭಗೊಂಡು ಬಸ್ ನಿಲ್ದಾಣದವರೆಗೆ ನಡೆಯಲಿದೆ. ಬಳಿಕ ಗಣ್ಯರ ಉಪಸ್ಥಿತಿಯಲ್ಲಿ ತಾಲೂಕಿನ ಮನೆ ಹಬ್ಬವಾದ ದೋಸೆಹಬ್ಬಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಲಿದ್ದಾರೆ.


ಇದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ ಸಾಯಂಕಾಲದವರೆಗೆ ನಡೆಯಲಿದ್ದು, ಮಕ್ಕಳ ಹುಲಿವೇಷ ಸ್ಪರ್ಧೆ ಬಾಲೆ ಪಿಲಿ ಸಂಜೆ 6ರ ಗೋಧೋಳಿ ಮುಹೂರ್ತದಲ್ಲಿ ಗೋ ಪೂಜಾ ಉತ್ಸವ, ದೀಪ ಪ್ರಜ್ವಲನೆ ಹಾಗೂ ರಾತ್ರಿ ಭಜರಂಗ ಬಲಿ ನಾಟಕ ಪ್ರದರ್ಶನವೂ ಜರಗಲಿದೆ. ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು, ಜಿಲ್ಲಾ ಬಿಜೆಪಿ ಮುಖಂಡರು, ಸಂಸದರು, ಶಾಸಕರೂ ಸೇರಿದಂತೆ ಹಲವು ಗಣ್ಯರು ಭಾಗಿಯಾಗುವ ಈ ಸಾಂಸ್ಕೃತಿಕ ಹಬ್ಬದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಆಗಮಿಸಿ ದೋಸೆ ಸವಿದು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

