Tue. Oct 28th, 2025

Belthangady: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ‌ – ದನದ ಮಾಂಸ ಮತ್ತು ಪರಿಕರಗಳು ಪತ್ತೆ – ಇಬ್ಬರು ಆರೋಪಿಗಳು ಅಂದರ್‌

ಬೆಳ್ತಂಗಡಿ :(ಅ.28) ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ ಮಾಡಿದ ಘಟನೆ ನಡೆದಿದೆ.

ಇದನ್ನೂ ಓದಿ: ⭕ಮಂಗಳೂರು: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್ – ಸಿದ್ದರಾಮಯ್ಯ

ಗೋವುಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.


ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಓಮನ ನೇತೃತ್ವದ ತಂಡ ಅ.27 ರಂದು ಮಧ್ಯಾಹ್ನ 2:30 ಕ್ಕೆ ದಾಳಿ ಮಾಡಿದ್ದಾರೆ.


ದಾಳಿ ವೇಳೆ 91 ಕೆ.ಜಿ ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದು. ಗೋಮಾಂಸ ಮಾಡುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಅಬ್ದುಲ್ ನಝೀರ್ ) ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಝಕಾರಿಯಾ ನನ್ನು ಬಂಧಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ 33(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್ ಮಾರ್ಗದರ್ಶನದಲ್ಲಿ‌, ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಆನಂದ್.ಎಮ್ ಮತ್ತು ವೇಣೂರು ಸಬ್ ಇನ್ಸ್ಪೆಕ್ಟರ್ ಓಮನ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

Leave a Reply

Your email address will not be published. Required fields are marked *