State weather report: (ಅ.29) ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.




