Thu. Oct 30th, 2025

Subramanya: ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ – ಹಲವರಿಗೆ ಗಂಭೀರ ಗಾಯ

ಸುಬ್ರಹ್ಮಣ್ಯ: ಬಿಸ್ಲೆ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನ ಪಲ್ಟಿಯಾಗಿದ್ದು, ವ್ಯಾನ್ನಲ್ಲಿದ್ದವರಿಗೆ ಗಂಭೀರ ಗಾಯಗಳಾದ ಘಟನೆ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ: 🔴ಉಡುಪಿ: ನವೆಂಬರ್ 28 ರಂದು ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ

ಏನಿದು ಘಟನೆ?

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆ ಕಾರ್ಯಕ್ರಮವಿತ್ತು. ಕೂಡುರಸ್ತೆ ವನಗೂರು ಯುವಕ ಹಾಗೂ ಏನೆಕಲ್ಲಿನ ಯುವತಿ ಜತೆ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು.

ಈ ಮದುವೆಗಾಗಿ ವರನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಹೀಗೆ ಬರುತ್ತಿರುವಾಗ ವ್ಯಾನ್’ನಲ್ಲಿದ್ದ ಹಲವರಿಗೆ ಗಂಭೀರ ಗಾಯವಾಗಿದೆ, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್’ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *