ಉಜಿರೆ : ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ! ವಿಜಯ್ ಲೋಬೋರವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.

ಇದನ್ನೂ ಓದಿ: ⭕ಶಿವಮೊಗ್ಗ: ಆಸ್ಪತ್ರೆಯಲ್ಲಿ ಜೀವ ಬಿಟ್ಟ ಹೆಂಡತಿ
ಸಂಪನ್ಮೂಲ ವ್ಯಕ್ತಿಯಾಗಿ ವಾಮದಪದವು ಸರಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಶಾಲ್ ಪಿಂಟೋ ಕಾರ್ಯಗಾರವನ್ನು ನಡೆಸಿ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಶಾಸ್ತ್ರದಲ್ಲಿ ವಿದ್ಯಾರ್ಥಿಗಳಿಗೆ ಇರುವ ಬೇರೆ ಬೇರೆ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.ಉಪನ್ಯಾಸಕ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.





