ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ.

ಇದನ್ನೂ ಓದಿ: 🟣ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ
ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.



