Sat. Nov 8th, 2025

ಉಜಿರೆ: ಬರೆಂಗಾಯದಲ್ಲಿ ಉಜಿರೆ ಎಸ್.ಡಿ.ಎಂ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಬರೆಂಗಾಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ನಿಡ್ಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ಯಾಮಲಾ ಶಿಬಿರವನ್ನು ಉದ್ಘಾಟಿಸಿದರು.

ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

ನಂತರ ಮಾತನಾಡಿದ ಅವರು “ರಾಷ್ಟೀಯ ಸೇವಾ ಯೋಜನೆಯು ದೇಶ ಸೇವೆಯಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆ. ಶಿಬಿರಾರ್ಥಿಗಳು ಶಿಬಿರದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಉತ್ತಮ ಸ್ವಯಂ ಸೇವಕರಾಗಲು ಸಾಧ್ಯ” ಎoದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ “ಎನ್ಎಸ್ ಎಸ್ ಮೂಲಕ ವ್ಯಕ್ತಿಯ ಸಂಪೂರ್ಣವಾದ ಬೆಳವಣಿಗೆ ಆಗುತ್ತದೆ. ಗ್ರಾಮಗಳ ಅಭಿವೃದ್ಧಿ ಎನ್ ಎಸ್ ಎಸ್ ನ ಮೂಲ ಉದ್ದೇಶ.ಜೊತೆಗೆ ದೇಶದಲ್ಲಿ ಬಹುದೊಡ್ಡ ಯುವ ಶಕ್ತಿಯನ್ನು ನಿರ್ಮಾಣ ಮಾಡಲು ಸಾಧ್ಯವಾಗುತದೆ” ಎಂದು ಹೇಳಿದರು. ನಿಡ್ಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರುಕ್ಮಯ್ಯ ಪೂಜಾರಿ ನಶಾ ಮುಕ್ತ ಭಾರತ ಕುರಿತ ಕರ ಪತ್ರವನ್ನು ಬಿಡುಗಡೆಗೊಳಿಸಿದರು.


ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯರಾದ ಶೈಲಜಾ, ನಿಸರ್ಗ ಯುವಜನೇತರ ಮಂಡಲದ ಗೌರವ ಅಧ್ಯಕ್ಷರಾದ ನವೀನ್ ಕುಮಾರ್ ಗಾoತ್ರoಡ, ಬೆರoಗಾಯ ಶಾಲೆಯ ಮುಖ್ಯ ಶಿಕ್ಷಕರಾದ ಗೋಪಾಲ್, ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿ ಸಹಯೋಜನಾಧಿಕಾರಿ ಶೋಭಾ ವಂದಿಸಿದರು.ಸ್ವಯಂ ಸೇವಕಿ ಧನ್ಯ ನಿರೂಪಿಸಿದರು.

Leave a Reply

Your email address will not be published. Required fields are marked *